ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು 10 ಸಹಾಯಕ ಪ್ರಾಧ್ಯಾಪಕ ಮತ್ತು ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 29 ಮತ್ತು ಮಾರ್ಚ್ 30,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿದ್ಯಾರ್ಹತೆ:
ಸ್ನಾತಕೋತ್ತರ ಪದವಿ, ಎಂ.ಎಡ್, ಎಂ.ಎ, ಬಿ.ಎಸ್ಸಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಮತ್ತು ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ ಮತ್ತು ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 29 ಮತ್ತು ಮಾರ್ಚ್ 30,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











