
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ 11 ಪ್ರಾಧ್ಯಾಪಕ, ಕಂಪ್ಯೂಟರ್ ಸಹಾಯಕ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 21 ರಿಂದ 23,2021ರ ವರೆಗೆ ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ. ಆಸಕ್ತ ಅರ್ಹ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:
ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಪ್ರಾಧ್ಯಾಪಕ, ಕಂಪ್ಯೂಟರ್ ಸಹಾಯಕ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂ.ಎಡ್, ಎಂ.ಲಿಬ್.ಸೈನ್ಸ್/ಎಂ.ಲಿ.ಸೈನ್ಸ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ, ಪದವಿ ಮತ್ತು ಬಿ.ಎಸ್ಸಿ/ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ:
ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಪ್ರಾಧ್ಯಾಪಕ, ಕಂಪ್ಯೂಟರ್ ಸಹಾಯಕ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಯುಜಿಸಿ/ಎನ್‌ಸಿಇಆರ್‌ಟಿ/ಜಿಒಐ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:
ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ, ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ, ಕಂಪ್ಯೂಟರ್ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 17,000/-ರೂ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:
ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಪ್ರಾಧ್ಯಾಪಕ, ಕಂಪ್ಯೂಟರ್ ಸಹಾಯಕ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಅಕ್ಟೋಬರ್ 21 ರಿಂದ ಅಕ್ಟೋಬರ್ 23,2021ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.