RIE Mysore Recruitment 2022 : 10 ಪ್ರಾಧ್ಯಾಪಕ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರಿನಲ್ಲಿ 10 ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 22,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಉದ್ಯೋಗಾವಕಾಶ

RIE Mysore ನೇಮಕಾತಿ 2022 ವಿದ್ಯಾರ್ಹತೆ :

ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು ನೇಮಕಾತಿಯ ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ಪಿಹೆಚ್.ಡಿ, ಎಂ.ಎಸ್ಸಿ, ಎಂ.ಎಡ್, ಎಂ.ಫಿಲ್, ಸ್ನಾತಕೋತ್ತರ ಪದವಿ, ಎಂಬಿಬಿಎಸ್, ಬಿ.ಎಸ್ಸಿ, ಬಿ.ಎಡ್, 10ನೇ ತರಗತಿ, 12ನೇ ತರಗತಿ, ಎಂ.ಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

RIE Mysore ನೇಮಕಾತಿ 2022 ವಯೋಮಿತಿ :

ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು ನೇಮಕಾತಿಯ ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RIE Mysore ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು ನೇಮಕಾತಿಯ ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಉದ್ಯೋಗಾವಕಾಶ

RIE Mysore ನೇಮಕಾತಿ 2022 ವೇತನ :

ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು ನೇಮಕಾತಿಯ ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 1,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

RIE Mysore ನೇಮಕಾತಿ 2022 ಅರ್ಜಿ ಶುಲ್ಕ :

ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರಿನಲ್ಲಿ ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

RIE Mysore ನೇಮಕಾತಿ 2022 ಸಂದರ್ಶನ ವಿವರ :

ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು ನೇಮಕಾತಿಯ ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://riemysore.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 21 ಮತ್ತು ಜುಲೈ 22,2022ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
RIE mysore recruitment 2022 notification has been released for 10 professor and other posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+