RIMS Recruitment 2020: ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ಇಲ್ಲಿ 9 ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ, ಜ್ಯೂನಿಯರ್ ನರ್ಸ್/ಲ್ಯಾಬ್ ಟೆಕ್ನೀಶಿಯನ್/ಫೀಲ್ಡ್ ವರ್ಕರ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ನವೆಂಬರ್ 17,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿ.

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಹುದ್ದೆಗಳ ವಿವರ:

ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ-6 ಹುದ್ದೆಗಳು
ಜ್ಯೂನಿಯರ್ ನರ್ಸ್/ಲ್ಯಾಬ್ ಟೆಕ್ನೀಶಿಯನ್/ಫೀಲ್ಡ್ ವರ್ಕರ್-2 ಹುದ್ದೆಗಳು
ಡಾಟಾ ಎಂಟ್ರಿ ಆಪರೇಟರ್ - 1 ಹುದ್ದೆ
ಒಟ್ಟು 9 ಹುದ್ದೆಗಳು

ವಿದ್ಯಾರ್ಹತೆ:

ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಗ್ರಾಜುಯೇಟ್ ಇನ್ ಸೈನ್ಸ್/ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ವಿದ್ಯಾರ್ಹತೆ, ಜ್ಯೂನಿಯರ್ ನರ್ಸ್/ಲ್ಯಾಬ್ ಟೆಕ್ನೀಶಿಯನ್/ಫೀಲ್ಡ್ ವರ್ಕರ್ ಹುದ್ದೆಗೆ ಪಿಯುಸಿ ಅಥವಾ ತತ್ಸಮಾನ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಇಂಟರ್ ಮೀಡಿಯೇಟ್ ಅಥವಾ ಪಿಯುಸಿ ಅಥವಾ ೧೨ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 30 ವರ್ಷ, ಜ್ಯೂನಿಯರ್ ನರ್ಸ್/ಲ್ಯಾಬ್ ಟೆಕ್ನೀಶಿಯನ್/ಫೀಲ್ಡ್ ವರ್ಕರ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,000/-ರೂ, ಜ್ಯೂನಿಯರ್ ನರ್ಸ್/ಲ್ಯಾಬ್ ಟೆಕ್ನೀಶಿಯನ್/ಫೀಲ್ಡ್ ವರ್ಕರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.rims-raichur.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 17,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Dean-cum-Director,
Raichur institute of medical sciences,
Hyderabad road,
raichur -584102.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RIMS recruitment 2020 notification has been released for project technical officer, junior officer and various posts. Interested candidates can apply before November 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+