RITES Limited Recruitment 2021: 7 ಜ್ಯೂನಿಯರ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸ್ ಲಿಮಿಟೆಡ್ (ರೈಟ್ಸ್ ಲಿಮಿಟೆಡ್) 7 ಜ್ಯೂನಿಯರ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ರೈಟ್ಸ್ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ..ಏ.7ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂಬಿಎ, ಪಿಜಿ ಡಿಪ್ಲೋಮಾ, ಪದವಿ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 32 ವರ್ಷ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಜ್ಯೂನಿಯರ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600/-ರೂ, ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 300/-ರೂ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 300/-ರೂ, ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rites.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
RITES limited recruitment 2021 notification has been released for 7 junior manager posts. Interested candidates can apply before April 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X