RITES Recruitment 2019: 47 ಆಪರೇಟರ್ ಮತ್ತು ಸೈಟ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೇ ಸಚಿವಾಲಯದ ಅಡಿಯಲ್ಲಿ ಬರುವ RITES Ltd ಸಂಸ್ಥೆಯು 47 ಆಪರೇಟರ್ ಮತ್ತು ಸೈಟ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಟಕಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ರೈಟ್ಸ್ ರೈಲ್ವೆ ಇಲಾಖೆಯು 47 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಆಪರೇಟರ್ ಮತ್ತು ಸೈಟ್ ಇನ್ಸ್‌ಪೆಕ್ಟರ್
Organisation RITES Ltd ರೈಲ್ವೇ ಸಚಿವಾಲಯ
Educational Qualification ಡಿಪ್ಲೋಮಾ/ಪದವಿ
Job Location ಚೆನ್ನೈ, ಭಾರತದೆಲ್ಲೆಡೆ
Salary Scale ಸೈಟ್ ಇನ್ಸ್‌ಪೆಕ್ಟರ್- ತಿಂಗಳಿಗೆ 24,000/- ರಿಂದ 90,000/-ರೂ ಮತ್ತು ಆಪರೇಟರ್ -ತಿಂಗಳಿಗೆ 22,000/- ರಿಂದ 83,000/-ರೂ
Application Start Date September 18, 2019
Application End Date October 10, 2019

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 10,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:

ಆಪರೇಟರ್ ಮತ್ತು ಸೈಟ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಡಿಪ್ಲೋಮಾ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸೆಪ್ಟೆಂಬರ್ 1,2019ರ ಅನ್ವಯ ಗರಿಷ್ಟ 40ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸೈಟ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/- ರಿಂದ 90,000/-ರೂ ಮತ್ತು ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 83,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 300/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ / ಅಂಗವಿಕಲ ಅಭ್ಯರ್ಥಿಗಳು 100/-ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರೈಟ್ಸ್ ರೈಲ್ವೇ ನೇಮಕಾತಿಯ ಅಧಿಕೃತ ವೆಬ್‌ಸೈಟ್‌ https://ritesltd.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 10,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಆಭ್ಯರ್ಥಿಗಳು ಅರ್ಜಿ ಪ್ರಿಂಟೌಟ್‌ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅಕ್ಟೋಬರ್ 21,2019ರೊಳಗೆ ಪೋಸ್ಟ್ ಮೂಲಕ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ :

ಅಸಿಸ್ಟೆಂಟ್ ಮ್ಯಾನೇಜರ್,
ರೈಟ್ಸ್ ಭವನ್,
ಪ್ಲಾಟ್ ನಂ.1, ಸೆಕ್ಟರ್-29,
ಗುರಗಾಂ-122001,
ಹರಿಯಾಣ

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
RITES recruitment 2019 notification has been released on official website for the recruitment of 47 operator and site inspector posts.Interested candidates apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+