ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ 16 ಲೋಯರ್ ಡಿವಿಷನ್ ಕ್ಲರ್ಕ್, ಲ್ಯಾಬ್ ಅಟೆಂಡೆಂಟ್, ಎಂಟಿಎಸ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
12ನೇ ತರಗತಿ ಮತ್ತು ಮೆಟ್ರಿಕ್ಯುಲೇಶನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 18,000/- ರಿಂದ 63,200/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 50/-ರೂ ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ,ಪಂ/ಓಬಿಸಿ/ಅಂಗವಿಕಲ ಅಭ್ಯರ್ಥಿಗಳು ಯಾವುಧೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.rashtriyamilitaryschools.edu.in/ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಪ್ರಕಟಣೆ ಹೊರಡಿಸಿದ 45 ದಿನದೊಳಗಾಗಿ ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.