ರೈಲ್ವೆ ನೇಮಕಾತಿ ಬೋರ್ಡ್ NTPC ನೇಮಕಾತಿ 35277 ಸ್ಟೇಷನ್ ಮಾಸ್ಟರ್, ಟಿಕೆಟ್ ಕ್ಲರ್ಕ್ ಮತ್ತು ಜ್ಯೂನಿಯರ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡ ನಂತರ ಆನ್‌ಲೈನ್ ಮೂಲಕ ಅರ್ಜಿಯನ್ನು ಮಾರ್ಚ್ 31,2019ರೊಳಗೆ ಸಲ್ಲಿಸಬಹುದು.

| CRITERIA | DETAILS |
| Name Of The Posts | ಸ್ಟೇಷನ್ ಮಾಸ್ಟರ್, ಟಿಕೆಟ್ ಕ್ಲರ್ಕ್ ಮತ್ತು ಜ್ಯೂನಿಯರ್ ಕ್ಲರ್ಕ್ |
| Organisation | ರೈಲ್ವೆ ನೇಮಕಾತಿ ಬೋರ್ಡ್ |
| Educational Qualification | ಪಿಯುಸಿ ,ಪದವಿ |
| Job Location | ಭಾರತದೆಲ್ಲೆಡೆ |
| Salary Scale | ಜ್ಯೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜ್ಯೂನಿಯರ್ ಟೈಂ ಕೀಪರ್ ಮತ್ತು ಟ್ರೈನ್ಸ್ ಕ್ಲರ್ಕ್ - 19,900/-ರೂ, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ - 21,700/- ರೂ, ಟ್ರಾಫಿಕ್ ಅಸಿಸ್ಟೆಂಟ್ - 25,500/- ರೂ, ಗೂಡ್ಸ್ ಗಾರ್ಡ್,ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್,ಜ್ಯೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಮತ್ತು ಸೀನಿಯರ್ ಟೈಂ ಕೀಪರ್- 29,200/- ರೂ ಮತ್ತು ಕಮರ್ಷಿಯಲ್ ಅಪ್ರೆಂಟಿಸ್ & ಸ್ಟೇಷನ್ ಮಾಸ್ಟರ್ -35,400/-ರೂ |
| Application Start Date | February 28, 2019 |
| Application End Date | March 31, 2019 |
ವಿದ್ಯಾರ್ಹತೆ:
ಜ್ಯೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ , ಜ್ಯೂನಿಯರ್ ಟೈಂ ಕೀಪರ್, ಟ್ರೈನ್ಸ್ ಕ್ಲರ್ಕ್, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಮತ್ತು ಟ್ರಾಫಿಕ್ ಅಸಿಸ್ಟೆಂಟ್ , ಗೂಡ್ಸ್ ಗಾರ್ಡ್, ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಜ್ಯೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್, ಸೀನಿಯರ್ ಟೈಂ ಕೀಪರ್ , ಕಮರ್ಷಿಯಲ್ ಅಪ್ರೆಂಟಿಸ್ ಮತ್ತು ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಜ್ಯೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ | 4319 |
| ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ | 760 |
| ಜ್ಯೂನಿಯರ್ ಟೈಂ ಕೀಪರ್ | 17 |
| ಟ್ರೈನ್ಸ್ ಕ್ಲರ್ಕ್ | 592 |
| ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ | 4940 |
| ಟ್ರಾಫಿಕ್ ಅಸಿಸ್ಟೆಂಟ್ | 88 |
| ಗೂಡ್ಸ್ ಗಾರ್ಡ್ | 5748 |
| ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ | 5638 |
| ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ | 2873 |
| ಜ್ಯೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ | 3164 |
| ಸೀನಿಯರ್ ಟೈಂ ಕೀಪರ್ | 14 |
| ಕಮರ್ಷಿಯಲ್ ಅಪ್ರೆಂಟಿಸ್ | 259 |
| ಸ್ಟೇಷನ್ ಮಾಸ್ಟರ್ | 6865 |
| ಒಟ್ಟು | 35,277 |
ವಯೋಮಿತಿ:
ಖಾಲಿ ಇರುವ ವಿವಿಧ ಹುದ್ದೆಗಳಿಗೆ ಜುಲೈ 2,2019ರ ಅನ್ವಯ 18 ರಿಂದ 33 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಜ್ಯೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜ್ಯೂನಿಯರ್ ಟೈಂ ಕೀಪರ್ ಮತ್ತು ಟ್ರೈನ್ಸ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/-ರೂ, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700/- ರೂ, ಟ್ರಾಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/- ರೂ, ಗೂಡ್ಸ್ ಗಾರ್ಡ್,ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್,ಜ್ಯೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಮತ್ತು ಸೀನಿಯರ್ ಟೈಂ ಕೀಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,200/- ರೂ ಮತ್ತು ಕಮರ್ಷಿಯಲ್ ಅಪ್ರೆಂಟಿಸ್ & ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,400/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಏಪ್ರಿಲ್ 5,2019 ರೊಳಗೆ ಪಾವತಿಸಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್ http://www.rrbkolkata.gov.in/ ಗೆ ಹೋಗಿ ಅಜಿಯನ್ನು ಮಾರ್ಚ್ 31,2019 ರೊಳಗೆ ಸಲ್ಲಿಸಬೇಕು.
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











