ಆರ್ಆರ್ಸಿ ದಕ್ಷಿಣ ಮಧ್ಯ ರೈಲ್ವೆ 96 ಜ್ಯೂನಿಯರ್ ಇಂಜಿನಿಯರ್, ಜ್ಯೂನಿಯರ್ ಟ್ರಾನ್ಸ್ಲೇಟರ್ ಮತ್ತು ಸ್ಟೆನೋಗ್ರಾಫರ್ (ಗ್ರೇಡ್ III) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಏಪ್ರಿಲ್ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಡಿಪ್ಲೋಮಾ, ಬಿ.ಇ/ಬಿ.ಟೆಕ್, ಸ್ನಾತಕೋತ್ತರ ಪದವಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಜುಲೈ 1,2021ರ ಅನ್ವಯ ಸಾಮಾನ್ಯ ವರ್ಗದ ಗರಿಷ್ಟ 42 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 45 ವರ್ಷ ಮತ್ತು ಪ.ಜಾ/ಪ.ಪಂ ಗರಿಷ್ಟ 47 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಆಯ್ಕೆ ಪ್ರಕ್ರಿಯೆ:
ಜ್ಯೂನಿಯರ್ ಇಂಜಿನಿಯರ್, ಜ್ಯೂನಿಯತ್ ಟ್ರಾನ್ಸ್ಲೇಟರ್ ಮತ್ತು ಸ್ಟೆನೋಗ್ರಾಫರ್ (ಗ್ರೇಡ್ III) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ/ಟ್ರಾನ್ಸ್ಲೇಟರ್ ಪರೀಕ್ಷೆ/ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://scr.indianrailways.gov.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 14,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.