ಭಾರತೀಯ ರೈಲ್ವೆಯ ನೈಋತ್ಯ ವಲಯದ 2019ರ 81 ಹುದ್ದೆಗಳ ನೇಮಕಾತಿ ಕುರಿತಂತೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಅಭ್ಯರ್ಥಿಗಳು ಫೆಬ್ರವರಿ 1.2019 ರೊಳಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹುದ್ದೆಗಳ ವಿವರವನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್, ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ |
| Organisation | RRC ನೈಋತ್ಯ ರೈಲ್ವೆ |
| Educational Qualification | ಡಿಪ್ಲೊಮ, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಸಮಾನ ಅರ್ಹತೆ |
| Job Location | ಕರ್ನಾಟಕ |
| Salary Scale | 25,000/-ರಿಂದ 37,000/-ರೂ |
| Application Start Date | January 10, 2019 |
| Application End Date | February 1, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮ, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಸಮಾನ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 24 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿ ಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/- ರಿಂದ 37,000/-ರೂ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು ಶುಲ್ಕ 100/- ರೂ ಮತ್ತು SC/ST/PH ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
ಈ ಹುದ್ದೆಗಳ ವಯೋಮಿತಿ ಸಡಿಲಿಕೆ ಹಾಗೂ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











