ರಾಮನ್ ಸಂಶೋಧನಾ ಸಂಸ್ಥೆ 3 ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಸಂಶೋಧನಾ ಸಹಾಯಕ |
| Organisation | ರಾಮನ್ ಸಂಶೋಧನಾ ಸಂಸ್ಥೆ |
| Educational Qualification | ಎಂ.ಇ /ಎಂ.ಟೆಕ್ ಮತ್ತು ಬಿ.ಇ / ಬಿ.ಟೆಕ್ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 23,500/-ರೂ |
| Application Start Date | November 18, 2019 |
| Application End Date | December 17, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಇ /ಎಂ.ಟೆಕ್ ಮತ್ತು ಬಿ.ಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 30 ಮತ್ತು 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ರಾಮನ್ ಸಂಶೋಧನಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್ http://www.rri.res.in/ ಗೆ ಹೋಗಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.


Click it and Unblock the Notifications











