
ರಾಮನ್ ಸಂಶೋಧನಾ ಸಂಸ್ಥೆ (ಆರ್‌ಆರ್‌ಐ) 2 ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಎಂ.ಎಸ್ಸಿ/ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಮೇ 15,2021ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.rri.res.in/index.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











