ರಾಮನ್ ಸಂಶೋಧನಾ ಸಂಸ್ಥೆ (ಆರ್‌ಆರ್‌ಐ) 2 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಮಾರ್ಚ 31,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 38,000/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ಮತ್ತು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ರಾಮನ್ ಸಂಶೋಧನಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











