ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರೈಲ್ ವ್ಹೀಲ್ ಫ್ಯಾಕ್ಟರ್ (ಆರ್‌ಡಬ್ಲ್ಯೂಎಫ್) 192 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ನವೆಂಬರ್ 15,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

192 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರೈಲ್ ವ್ಹೀಲ್ ಫ್ಯಾಕ್ಟರಿ

CRITERIA DETAILS
Name Of The Posts ಟ್ರೇಡ್ ಅಪ್ರೆಂಟಿಸ್
Organisation ರೈಲ್ ವ್ಹೀಲ್ ಫ್ಯಾಕ್ಟರ್ (ಆರ್‌ಡಬ್ಲ್ಯೂಎಫ್)
Educational Qualification ಎಸ್‌.ಎಸ್‌.ಎಲ್‌.ಸಿ / 10ನೇ ತರಗತಿ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 10,899/-ರಿಂದ 12,261/-ರೂ
Application Start Date October 17, 2019
Application End Date November 15, 2019

ವಿದ್ಯಾರ್ಹತೆ:

ಎಸ್‌.ಎಸ್‌.ಎಲ್‌.ಸಿ / 10ನೇ ತರಗತಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 15,2019ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,899/-ರಿಂದ 12,261/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ರೈಲ್ ವ್ಹೀಲ್ ಫ್ಯಾಕ್ಟರಿಯ ಅಧಿಕೃತ ವೆಬ್‌ಸೈಟ್‌ https://rwf.indianrailways.gov.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ನಂತರ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ನವೆಂಬರ್ 15,2019ರೊಳಗೆ ಪೋಸ್ಟ್ ಮೂಲಕ ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಹಿರಿಯ ಸಿಬ್ಬಂದಿ ಅಧಿಕಾರಿ,
ಸಿಬ್ಬಂದಿ ವಿಭಾಗ,
ರೈಲ್ ವ್ಹೀಲ್ ಫ್ಯಾಕ್ಟರಿ,ಯಲಹಂಕ,
ಬೆಂಗಳೂರು -560 064

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Rail wheel factory (RWF) recruitment 2019 notification has been released on official website for the recruitment of 192 trade apprentice posts. Interested candidates can apply before 15th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+