ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್) ನೇಮಕಾತಿ 129 ಮೆಡಿಕಲ್ ಆಫೀಸರ್ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಮೆಡಿಕಲ್ ಆಫೀಸರ್ |
| Organisation | ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್) |
| Educational Qualification | ಎಂಬಿಬಿಎಸ್ ಪದವಿ , ಎಂಬಿಬಿಎಸ್ & ಪದವಿ/ ಡಿಪ್ಲೋಮ/ ಸರ್ಟಿಫಿಕೇಟ್, ಪಿಜಿ ಪದವಿ /ಡಿಎನ್‌ಬಿ , |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 24,900/- ರಿಂದ 58,000/-ರೂ |
| Application Start Date | June 6, 2019 |
| Application End Date | June 26, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಎಂಬಿಬಿಎಸ್ ಪದವಿ, ಎಂಬಿಬಿಎಸ್ ಮತ್ತು ಪದವಿ/ ಡಿಪ್ಲೋಮ / ಸರ್ಟಿಫಿಕೇಟ್ ಹಾಗೂ ಪಿಜಿ ಪದವಿ / ಡಿಎನ್‌ಬಿ ವಿದ್ಯಾರ್ಹತೆಯನ್ನು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದಿಂದ ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಜೂನ್ 26,2019ರ ಅನ್ವಯ ಗರಿಷ್ಟ 30 ಮತ್ತು 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ , ಓಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ (ಓಬಿಸಿ-ಎನ್‌ಸಿಎಲ್) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,900/- ರಿಂದ 58,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್‌ನಲ್ಲಿ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಎಐಎಲ್ ನ ಅಧಿಕೃತ ವೆಬ್‌ಸೈಟ್ https://www.sail.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











