SAIL Recruitment 2019: 399 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್‌) 399 ಮ್ಯಾನೇಜ್ಮೆಂಟ್ ಟ್ರೈನಿ (ಟೆಕ್ನಿಕಲ್)ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 15,2019 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

399 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎಸ್‌ಎಐಎಲ್‌

CRITERIA DETAILS
Name Of The Posts ಮ್ಯಾನೇಜ್ಮೆಂಟ್ ಟ್ರೈನಿ (ಟೆಕ್ನಿಕಲ್)
Organisation ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್‌)
Educational Qualification ಇಂಜಿನಿಯರಿಂಗ್‌ನಲ್ಲಿ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 58,297/-ರೂ
Application Start Date November 25, 2019
Application End Date December 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಮ್ಯಾನೇಜ್ಮೆಂಟ್ ಟ್ರೈನಿ (ಟೆಕ್ನಿಕಲ್) ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿಯನ್ನು
ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 14,2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 58,297/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಗುಂಪು ಚರ್ಚೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್‌ನಲ್ಲಿ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್‌) ನ ಅಧಿಕೃತ ವೆಬ್‌ಸೈಟ್‌ https://www.sail.co.in/ ಗೆ ಹೋಗಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
SAIL recruitment 2019 notification has been released on official website for the recruitment of 399 management trainee (technical) posts. Interested candidates can apply through online before 15th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X