SAIL Recruitment 2020: 37 ಅಧಿಕಾರಿ ಮತ್ತು ಟೆಕ್ನಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್) 37 ಮೆಡಿಕಲ್ ಸ್ಪೆಷಲಿಸ್ಟ್, ಮೆಡಿಕಲ್ ಆಫೀಸ್ ಮತ್ತು ಜ್ಯೂನಿಯರ್ ಮೆಡಿಕಲ್ ಟೆಕ್ನಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಎಸ್‌ಎಐಎಲ್ ನಲ್ಲಿ 37 ಹುದ್ದೆಗಳ ನೇಮಕಾತಿ...ಜ.4ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಡಿಎನ್‌ಬಿ, ಡಿಐಹೆಚ್, ಎಎಪ್‌ಐಹೆಚ್, 10+2, ಡಿಪ್ಲೋಮಾ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 41 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂ, ಓಬಿಸಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 16,800/- ರಿಂದ 58,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು ಜ್ಯೂನಿಯರ್ ಮೆಡಿಕಲ್ ಟೆಕ್ನಾಲಜಿಸ್ಟ್ ಹುದ್ದೆಗಳಿಗೆ 295/-ರೂ ಮತ್ತು ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಮೆಡಿಕಲ್ ಸ್ಪೆಷಲಿಸ್ಟ್/ಮೆಡಿಕಲ್ ಆಫೀಸರ್ ಹುದ್ದೆಗಳಿಗೆ 590/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜನವರಿ 5,2021ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್) ಅಧಿಕೃತ ವೆಬ್‌ಸೈಟ್ https://sail.co.in/en/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SAIL recruitment 2020 notification has been released for 37 medical officer and junior medical technologist posts. Interested candidates can apply through online before January 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+