ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್) 50 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ, ಆಸಕ್ತರು ಜನವರಿ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಬಿ.ಎಸ್ಸಿ, 10ನೇ ತರಗತಿ, 12ನೇ ತರಗತಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಡಿಸೆಂಬರ್ 5,2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಲಿಗೆ 17,980/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಜನವರಿ 18,2021ರೊಳಗೆ ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











