ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐಎಲ್) 11 ಜಿಡಿಎಂಓ, ಡೆಂಟಿಸ್ಟ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 3,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ನೋಡಿ.

ವಿದ್ಯಾರ್ಹತೆ:
ಎಂಬಿಬಿಎಸ್, ಬಿಡಿಎಸ್, ಪಿಜಿ ಡಿಪ್ಲೋಮಾ ಮತ್ತು ಡಿಎಂ/ಎಸಿಹೆಚ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ವಯೋಮಿತಿ:
ಫೆಬ್ರವರಿ 5,2021ರ ಅನ್ವಯ ಗರಿಷ್ಟ 69 ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ವೇತನ:
ಜಿಡಿಎಂಓ, ಡೆಂಟಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 77,000/-ರೂ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/- ರಿಂದ 2,20,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನ ವಿವರ:
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 3,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ನಡೆಯುವ ಸ್ಥಳದ ವಿವರವನ್ನು ಅಧಿಸೂಚನೆಯಲ್ಲಿ ಓದಿ ಪಡೆಯಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











