ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 200 ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 5,2022 ರಿಂದ ಆಗಸ್ಟ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

SAIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಡಿಪ್ಲೋಮಾ, 12ನೇ ತರಗತಿ, ಪಿಜಿಡಿಸಿಎ, ಬಿಬಿಎ, ಪದವಿ, ಎಂಬಿಎ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
SAIL ನೇಮಕಾತಿ 2022 ವಯೋಮಿತಿ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
SAIL ನೇಮಕಾತಿ 2022 ವೇತನದ ವಿವರ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,000/- ರಿಂದ 17,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

SAIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
SAIL ನೇಮಕಾತಿ 2022 ಅರ್ಜಿ ಶುಲ್ಕ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
SAIL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://sail.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 5 ರಿಂದ ಆಗಸ್ಟ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.