ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 54 ಟ್ರೈನಿ ಟೀಚರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಏಪ್ರಿಲ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
SAIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಟೀಚರ್ ಹುದ್ದೆಗಳಿಗೆ ಪದವಿ ಮತ್ತು ಬಿ.ಎಡ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
SAIL ನೇಮಕಾತಿ 2022 ವಯೋಮಿತಿ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಟೀಚರ್ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
SAIL ನೇಮಕಾತಿ 2022 ವೇತನದ ವಿವರ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
SAIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
SAIL ನೇಮಕಾತಿ 2022 ಅರ್ಜಿ ಶುಲ್ಕ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
SAIL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://sail.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿದಗಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಏಪ್ರಿಲ್ 21,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ :
Asstt Mgr, Education Department, 2nd Floor, Nagar Sewa Bhawan, Bokaro Steel City - 827004, Jharkhand.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











