ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 639 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 9,2022 ರಿಂದ ಮಾರ್ಚ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
SAIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 12ನೇ ತರಗತಿ/ಇಂಟರ್ಮೀಡಿಯೇಟ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ ಮತ್ತು ಐಟಿಐ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
SAIL ನೇಮಕಾತಿ 2022 ವಯೋಮಿತಿ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
SAIL ನೇಮಕಾತಿ 2022 ವೇತನದ ವಿವರ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
SAIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
SAIL ನೇಮಕಾತಿ 2022 ಅರ್ಜಿ ಶುಲ್ಕ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
SAIL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.apprenticeshipindia.gov.in/apprenticeship/opportunity ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 26,2022 ರಿಂದ ಮಾರ್ಚ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.