ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 45 ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 13,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

SAIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಡಿಪ್ಲೋಮಾ, 12ನೇ ತರಗತಿ, ಪದವಿ, ಬಿ.ಎಸ್ಸಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
SAIL ನೇಮಕಾತಿ 2022 ವಯೋಮಿತಿ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಆಗಸ್ಟ್ 1,2022ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
SAIL ನೇಮಕಾತಿ 2022 ವೇತನದ ವಿವರ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,020/- ರಿಂದ 17,980/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

SAIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
SAIL ನೇಮಕಾತಿ 2022 ಅರ್ಜಿ ಶುಲ್ಕ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
SAIL ನೇಮಕಾತಿ 2022 ಸಂದರ್ಶನ ವಿವರ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://sail.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡಬೇಕು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 13,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ :
Confluence, Opp. to Burnpur Post Office, Near Bharti Bhawan, P.O. Burnpur - 713325, DT: Paschim Bardhaman, West Bengal.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











