SAIL Recruitment 2022 : 56 ದಾದಿ ಹುದ್ದೆಗಳಿಗೆ ನೇರ ಸಂದರ್ಶನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 56 ದಾದಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್‌ 30 ಮತ್ತು 31,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಭಾರತೀಯ ತೈಲ ನಿಗಮದಲ್ಲಿ 56 ದಾದಿ ಹುದ್ದೆಗಳ ನೇಮಕಾತಿ

SAIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ದಾದಿ ಹುದ್ದೆಗಳಿಗೆ ಡಿಪ್ಲೋಮಾ, ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

SAIL ನೇಮಕಾತಿ 2022 ವಯೋಮಿತಿ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ದಾದಿ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SAIL ನೇಮಕಾತಿ 2022 ವೇತನದ ವಿವರ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ದಾದಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/- ರೂ ವೇತನವನ್ನು ನೀಡಲಾಗುವುದು.

ಭಾರತೀಯ ತೈಲ ನಿಗಮದಲ್ಲಿ 56 ದಾದಿ ಹುದ್ದೆಗಳ ನೇಮಕಾತಿ

SAIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ದಾದಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

SAIL ನೇಮಕಾತಿ 2022 ಅರ್ಜಿ ಶುಲ್ಕ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ದಾದಿ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

SAIL ನೇಮಕಾತಿ 2022 ಸಂದರ್ಶನ ವಿವರ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ದಾದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://sail.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಆಗಸ್ಟ್ 29,2022ರೊಳಗೆ ಮೇಲ್ ಮಾಡಬೇಕು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 30 ಮತ್ತು 31,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :
DSP Main Hospital, J.M. Sengupta Road, B-Zone, Durgapur - 713205, West Bengal.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SAIL recruitment 2022 notification has been released for 56 nurse Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+