ಸೈನಿಕ ಶಾಲೆ ಕೊಡಗಿನಲ್ಲಿ 10 ಟಿಜಿಟಿ, ಕೌನ್ಸೆಲರ್, ಇನ್‌ಸ್ಟ್ರಕ್ಟರ್, ಬ್ಯಾಂಡ್ ಮಾಸ್ಟರ್, ವಾರ್ಡನ್ ಮತ್ತು ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಪದವಿ ಅಥವಾ ಸ್ನಾಕತೋತ್ತರ ಪದವಿ, ಮೆಟ್ರಿಕ್ಯುಲೇಶನ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಸೈನಿಕ ಶಾಲೆ ಕೊಡಗು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಕ್ಟೋಬರ್ 1,2021ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
ವೇತನ:
ಸೈನಿಕ ಶಾಲೆ ಕೊಡಗು ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,376/- ರಿಂದ 57,472/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಸೈನಿಕ ಶಾಲೆ ಕೊಡಗು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಸೈನಿಕ ಶಾಲೆ ಕೊಡಗು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 400/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ www.sainikschoolkodagu.edu.in ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ತದನಂತರ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 16,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
The principal sainik school kodagu,
PO : Kudige, Kushalnagar Taluk,
Dist. Kodagu,
Karnataka,
PIN - 571 232.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











