ಸಕಾಲ ಮಿಷನ್ ಮತ್ತು ಕರ್ನಾಟಕ ಸರ್ಕಾರದ ಇ-ಆಡಳಿತ ಉಪಕ್ರಮಗಳನ್ನು ನಿರ್ವಹಿಸಲು ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ತದನಂತರ ಫೆಬ್ರವರಿ 1,2022ರೊಳಗೆ ಅರ್ಜಿಯನ್ನು ಹಾಕಬಹುದು.

Sakala Mission Karnataka ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :
ಸಕಾಲ ಮಿಷನ್ ಕರ್ನಾಟಕ ನೇಮಕಾತಿಯ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿಇ ಇನ್ ಕಂಪ್ಯೂಟರ್ ಸೈನ್ಸ್ (ಎಂಟೆಕ್ ಐಚ್ಛಿಕ) ವಿದ್ಯಾರ್ಹತೆಯನ್ನು ಹೊಂದಿದರಬೇಕು.
ಅಭ್ಯರ್ಥಿಗಳಿಗೆ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಟೂಲ್ಸ್ ಮತ್ತು ಪ್ರಾಜೆಕ್ಟ್‌ಗಳ ನಿರ್ವಹಣೆ ಬಗ್ಗೆ ಅನುಭವವಿರಬೇಕು. 5 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
Sakala Mission Karnataka ನೇಮಕಾತಿ 2022 ವಯೋಮಿತಿ :
ಸಕಾಲ ಮಿಷನ್ ಕರ್ನಾಟಕ ನೇಮಕಾತಿಯ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳಿಗೆ ಫೆಬ್ರವರಿ 1,2022ರ ಅನ್ವಯ ಗರಿಷ್ಟ ೪೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Sakala Mission Karnataka ನೇಮಕಾತಿ 2022 ವೇತನ :
ಸಕಾಲ ಮಿಷನ್ ಕರ್ನಾಟಕ ನೇಮಕಾತಿಯ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,40,937/-ರೂ ವೇತನವನ್ನು ನೀಡಲಾಗುವುದು.
Sakala Mission Karnataka ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಸಕಾಲ ಮಿಷನ್ ಕರ್ನಾಟಕ ನೇಮಕಾತಿಯ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Sakala Mission Karnataka ನೇಮಕಾತಿ 2022 ಅರ್ಜಿ ಶುಲ್ಕ :
ಸಕಾಲ ಮಿಷನ್ ಕರ್ನಾಟಕ ನೇಮಕಾತಿಯ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನ ಓದಬಹುದು.
Sakala Mission Karnataka ನೇಮಕಾತಿ 2022 ಅರ್ಜಿ ಸಲ್ಲಿಕೆ :
ಸಕಾಲ ಮಿಷನ್ ಕರ್ನಾಟಕ ನೇಮಕಾತಿಯ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿಇ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖೆಗಳನ್ನು ಲಗತ್ತಿಸಿ aosakala@karnataka.gov.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಫೆಬ್ರವರಿ 1,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ http://sakala.kar.nic.in/ ವೆಬ್‌ಸೈಟ್ ಗೆ ಭೇಟಿ ನೀಡಿ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.