ಸರಸ್ವತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (ಸರಸ್ವತ್ ಬ್ಯಾಂಕ್) 150 ಬ್ಯುಸಿನೆಸ್ ಡೆವಲಪ್ಮೆಂಟ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾರ್ಚ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಫೆಬ್ರವರಿ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಬ್ಯುಸಿನೆಸ್ ಡೆವಲಪ್ಮೆಂಟ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,620/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.saraswatbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











