SBI PO Recruitment 2021 : 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 2056 ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಎಸ್‌ಬಿಐ 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿ

ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಒಂದು ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆಯು ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021ರ ವರೆಗೆ ನಡೆಯಲಿದೆ. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ನೇಮಕಾತಿ 2021 ಶೈಕ್ಷಣಿಕ ವಿದ್ಯಾರ್ಹತೆ :

ಎಸ್‌ಬಿಐ ನೇಮಕಾತಿ 2021 ಶೈಕ್ಷಣಿಕ ವಿದ್ಯಾರ್ಹತೆ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಡಿಸೆಂಬರ್ 31,2021ರ ಅನ್ವಯ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಎಸ್‌ಬಿಐ ನೇಮಕಾತಿ 2021 ವಯೋಮಿತಿ :

ಎಸ್‌ಬಿಐ ನೇಮಕಾತಿ 2021 ವಯೋಮಿತಿ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 12 ವರ್ಷ ಮತ್ತು ಅಂಗವಿಕಲ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಎಸ್‌ಬಿಐ ನೇಮಕಾತಿ 2021 ವೇತನದ ವಿವರ:

ಎಸ್‌ಬಿಐ ನೇಮಕಾತಿ 2021 ವೇತನದ ವಿವರ:

ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,960/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

ಎಸ್‌ಬಿಐ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಎಸ್‌ಬಿಐ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡತಕ್ಕದ್ದು.

ಎಸ್‌ಬಿಐ ನೇಮಕಾತಿ 2021 ಅರ್ಜಿ ಶುಲ್ಕ :

ಎಸ್‌ಬಿಐ ನೇಮಕಾತಿ 2021 ಅರ್ಜಿ ಶುಲ್ಕ :

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ ಓಬಿಸಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಎಸ್‌ಬಿಐ ನೇಮಕಾತಿ 2021 ಪ್ರಮುಖ ದಿನಾಂಕಗಳು :

ಎಸ್‌ಬಿಐ ನೇಮಕಾತಿ 2021 ಪ್ರಮುಖ ದಿನಾಂಕಗಳು :

ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕ: ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021
ಅರ್ಜಿ ಶುಲ್ಕ ಪಾವತಿಸುವ ದಿನಾಂಕ: ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021
ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ದಿನಾಂಕ: ನವೆಂಬರ್ ತಿಂಗಳ 1/2ನೇ ವಾರದ ನಂತರ
ಫೇಸ್-I: ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕ: ನವೆಂಬರ್/ಡಿಸೆಂಬರ್ 2021
ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ದಿನಾಂಕ: ಡಿಸೆಂಬರ್ 2021
ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವ ದಿನಾಂಕ: ಡಿಸೆಂಬರ್ 2021ರ 2/3ನೇ ವಾರದ ನಂತರ
ಫೇಸ್ II: ಆನ್‌ಲೈನ್ ಪ್ರಮುಖ ಪರೀಕ್ಷೆ ದಿನಾಂಕ: ಡಿಸೆಂಬರ್ 2021
ಮುಖ್ಯ ಪರೀಕ್ಷೆಯ ಫಲಿತಾಂಶ ದಿನಾಂಕ: ಜನವರಿ 2022
ಫೇಸ್ III: ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಫೆಬ್ರವರಿ 2022ರ 3/4ನೇ ವಾರ
ಫೇಸ್-III: ಸಂದರ್ಶನ ನಡೆಯುವ ದಿನಾಂಕ: ಫೆಬ್ರವರಿ 2022ರ 2/3ನೇ ವಾರ
ಅಂತಿಮ ಫಲಿತಾಂಶ ದಿನಾಂಕ: ಫೆಬ್ರವರಿ/ಮಾರ್ಚ್ 2022

ಎಸ್‌ಬಿಐ ನೇಮಕಾತಿ 2021 ಅರ್ಜಿ ಸಲ್ಲಿಸುವುದು ಹೇಗೆ :

ಎಸ್‌ಬಿಐ ನೇಮಕಾತಿ 2021 ಅರ್ಜಿ ಸಲ್ಲಿಸುವುದು ಹೇಗೆ :

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಎಸ್‌ಬಿಐ ನೇಮಕಾತಿ 2021ರ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
SBI PO recruitment 2021 notification has been released for 2056 posts. Interested candidates can apply before October 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X