ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ: 407 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ

ವೆಲ್ತ್‌ ಮ್ಯಾನೇಜ್‌ಮೆಂಟ್‌ ವಿಭಾಗದಲ್ಲಿನ ಹುದ್ದೆಗಳಿಗೆ ಈ ನೇಮಕ ನಡೆಯುತ್ತಿದ್ದು, ಐದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು 407 ಸ್ಪೆಷಲಿಸ್ಟ್‌ ಕೇಡರ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಎಸ್ ಬಿ ಐ ನೇಮಕಾತಿ

ಎಸ್ ಬಿ ಐ ನೇಮಕಾತಿ

ವೆಲ್ತ್‌ ಮ್ಯಾನೇಜ್‌ಮೆಂಟ್‌ ವಿಭಾಗದಲ್ಲಿನ ಹುದ್ದೆಗಳಿಗೆ ಈ ನೇಮಕ ನಡೆಯುತ್ತಿದ್ದು, ಐದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳ ಕಾರ್ಯನಿರ್ವಹಣೆಯ ಆಧಾರದಲ್ಲಿ ನೇಮಕಾವಧಿಯನ್ನು ಇನ್ನೂ ಐದು ವರ್ಷಗಳ ತನಕ ವಿಸ್ತರಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಹುದ್ದೆಗಳ ವಿವರ

ಹುದ್ದೆಗಳ ವಿವರ

ರಿಲೇಷನ್‌ಶಿಪ್‌ ಮ್ಯಾನೇಜರ್‌-224, ಅಕ್ವಿಷಿಷನ್‌ ರಿಲೇಷನ್‌ಶಿಪ್‌ ಮ್ಯಾನೇಜರ್‌-80, ಇನ್ವೆಸ್ಟ್‌ಮೆಂಟ್‌ ಕೌನ್ಸೆಲರ್‌-33, ಕಸ್ಟಮರ್‌ ರಿಲೇಷನ್‌ಶಿಪ್‌ ಎಕ್ಸಿಕ್ಯುಟಿವ್‌-55, ಝೋನಲ್‌ ಹೆಡ್‌ (ಸೇಲ್ಸ್‌)-4, ಕಂಪ್ಲೀಯನ್ಸ್‌ ಆಫೀಸರ್‌, ಹೆಡ್‌ (ಆಪರೇಷನ್ಸ್‌) ಮತ್ತು ಮ್ಯಾನೇಜರ್‌-ತಲಾ 1, ಪ್ರಾಜೆಕ್ಟ್ ಡೆವಲಪ್‌ಮೆಂಟ್‌ ಮ್ಯಾನೇಜರ್‌-3, ಇನ್ವೆಸ್ಟ್‌ಮೆಂಟ್‌ ಅಡ್ವೈಸರ್‌-2 ಮತ್ತು ಸೆಂಟ್ರಲ್‌ ಆಪರೇಷನ್ಸ್‌ ಟೀಮ್‌ ಸಪೋರ್ಟ್‌-3

ಶೈಕ್ಷಣಿಕ ವಿದ್ಯಾರ್ಹತೆ

ಸೆಂಟ್ರಲ್‌ ರಿಸರ್ಚ್‌ ಟೀಮ್‌, ಹೆಡ್‌ ಮತ್ತು ಪ್ರಾಜೆಕ್ಟ್ ಡೆವಲಪ್‌ಮೆಂಟ್‌ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ವಿಭಾಗಗಳಿಗೆ ಸಂಬಂಧಪಟ್ಟಂತೆ ಎಂಬಿಎ/ಎಂಎಂಎಸ್‌/ಪಿಜಿಡಿಎಂ/ಎಂಇ/ಎಂಟೆಕ್‌ ವಿದ್ಯಾರ್ಹತೆ ಹೊಂದಿರಬೇಕು. ಇನ್ನುಳಿದಂತೆ ರಿಲೇಷನ್‌ಶಿಪ್‌ ಮ್ಯಾನೇಜರ್‌, ಅಕ್ವಿಷಿಷನ್‌ ರಿಲೇಷನ್‌ಶಿಪ್‌ ಮ್ಯಾನೇಜರ್‌ ಸೇರಿದಂತೆ ಯಾವುದೇ ಹುದ್ದೆಗಳಿಗೂ ಅರ್ಜಿ ಸಲ್ಲಿಸಬೇಕಾದರೂ ಪದವೀಧರರಾಗಿರಬೇಕು.

ಅನುಭವ: ಆಯಾ ಹುದ್ದೆಗಳಿಗೆ ಅನುಗುಣವಾಗಿ ಪ್ರತಿ ಹುದ್ದೆಗೂ ನಿಗದಿತ ಸೇವಾನುಭವ ಕಡ್ಡಾಯಗೊಳಿಸಲಾಗಿದೆ. ಹೆಡ್‌ ಮತ್ತು ಝೋನಲ್‌ ಹೆಡ್‌ ಹುದ್ದೆಗಳಿಗೆ 15 ವರ್ಷ ಕಾಲ ಹಣಕಾಸು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ರಿಲೇಷನ್‌ಶಿಪ್‌ ಮ್ಯಾನೇಜರ್‌ ಹುದ್ದೆಗೆ ಮೂರು ವರ್ಷಗಳ ಸೇವಾನುಭವ ನಿಗದಿಪಡಿಸಲಾಗಿದೆ. ಇನ್ನುಳಿದಂತೆ ಪ್ರತಿ ಹುದ್ದೆಗೂ ಬೇರೆ ಬೇರೆ ಸೇವಾನುಭವ ನಿಗದಿಮಾಡಿರುವುದರಿಂದ ಅವುಗಳ ಕುರಿತಾದ ಸಂಪೂರ್ಣ ವಿವರಗಳನ್ನು ವೆಬ್‌ಸೈಟ್‌ನಿಂದ ಪಡೆಯಬಹುದು.

 

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡತಕ್ಕದ್ದು.

 ಸಲ್ಲಿಸಬೇಕಾದ ದಾಖಲೆಗಳು

ಸಲ್ಲಿಸಬೇಕಾದ ದಾಖಲೆಗಳು

ಬಯೋಡೇಟಾ , ಶೈಕ್ಷಣಿಕ ಪ್ರಮಾಣ ಪತ್ರಗಳು, ಜಾತಿ ಪ್ರಮಾಣಪತ್ರ, ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸತಕ್ಕದ್ದು

ಅರ್ಜಿ ಶುಲ್ಕ

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿ ಮತ್ತು ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಬಹುದಾಗಿದೆ.

ಆಯ್ಕೆ ವಿಧಾನ

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಆಧಾರದ ಮೇರೆಗೆ ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 15, 2018

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ: 022-2282 0427

ಹೆಚ್ಚಿನ ವಿವರಗಳಿಗೆ: www.sbi.co.in

 

More News  

For Quick Alerts
ALLOW NOTIFICATIONS  
For Daily Alerts

English summary
State Bank of India invites Online applications from Indian citizens for appointment of Specialist Cadre Officers for Wealth Management in State Bank of India. Candidates are requested to apply Online through Bank's website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+