ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2000 ಪ್ರೊಬೆಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಅರ್ಜಿಯನ್ನು ಏಪ್ರಿಲ್ 22,2019 ರೊಳಗೆ ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆ,ವಯೋಮಿತಿ ಮತ್ತು ನೀಡಲಾಗುವ ವೇತನದ ವಿವರದ ಬಗೆಗೆ ತಿಳಿಯಲು ಮುಂದೆ ಓದಿ

| CRITERIA | DETAILS |
| Name Of The Posts | ಪ್ರೊಬೆಷನರಿ ಆಫೀಸರ್ |
| Organisation | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
| Educational Qualification | ಯಾವುದೇ ಪದವಿ, ಸಿಎ |
| Job Location | ಭಾರತದೆಲ್ಲೆಡೆ |
| Salary Scale | 23,700/- ರಿಂದ 42,020/-ರೂ |
| Application Start Date | April 2, 2019 |
| Application End Date | April 22, 2019 |
ಶೈಕ್ಷಣಿಕ ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಯಾವುದೇ ಪದವಿ ಮತ್ತು ಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಏಪ್ರಿಲ್ 1,2019 ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ (ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ವರ್ಷ),(ಓಬಿಸಿ ಅಭ್ಯರ್ಥಿಗಳಿಗೆ 13 ವರ್ಷ) ಮತ್ತು( ಸಾಮಾನ್ಯ /ಆರ್ಥಿಕವಾಗಿ ಹಿಂದುಳಿಗೆ ಅಭ್ಯರ್ಥಿಗಳಿಗೆ 10 ವರ್ಷ), ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23,700/- ರಿಂದ 42,020/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಆರ್ಥಿಕವಾಗಿ ಹಿಂದುಳಿದ ವರ್ಗ/ ಓಬಿಸಿ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಏಪ್ರಿಲ್ 22,2019 ರೊಳಗೆ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸ್ಟೇಟ್ ಬ್ಯಾಂಕ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 22,2019ರೊಳಗೆ ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











