ಸ್ಟೇಟ್ ಬ್ಯಾಂಕ್ ಇಂಡಿಯಾ (ಎಸ್‌ಬಿಐ) ನೇಮಕಾತಿ 65 ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 12,2019 ರೊಳಗೆ ಅರ್ಜಿಯನ್ನುಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

| CRITERIA | DETAILS |
| Name Of The Posts | ವಿಶೇಷ ಕೇಡರ್ ಅಧಿಕಾರಿಗಳು |
| Organisation | ಸ್ಟೇಟ್ ಬ್ಯಾಂಕ್ ಇಂಡಿಯಾ (ಎಸ್‌ಬಿಐ) |
| Educational Qualification | ಎಂಬಿಬಿಎಸ್, ಸ್ನಾತಕೋತ್ತರ ಪದವಿ ಮತ್ತು ಸಿಎ / ಎಂಬಿಎ/ ಪಿಜಿಡಿಎಂ |
| Job Location | ಭಾರತದೆಲ್ಲೆಡೆ |
| Salary Scale | ಬ್ಯಾಂಕ್ ಮೆಡಿಕಲ್ ಆಫೀಸರ್ - ತಿಂಗಳಿಗೆ 31,705/- ರಿಂದ 45,950/-ರೂ, ಮ್ಯಾನೇಜರ್ ಅನಾಲಿಸ್ಟ್ -ತಿಂಗಳಿಗೆ 42,020/- ರಿಂದ 51,490/-ರೂ ಮತ್ತು ಅಡ್ವೈಸರ್ ಫಾರ್ ಫ್ರಾಡ್ ಮ್ಯಾನೇಜ್ಮೆಂಟ್ - ತಿಂಗಳಿಗೆ 50,000/-ರೂ |
| Application Start Date | May 21, 2019 |
| Application End Date | June 12, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಎಂಬಿಬಿಎಸ್, ಸ್ನಾತಕೋತ್ತರ ಪದವಿ ಮತ್ತು ಸಿಎ / ಎಂಬಿಎ/ ಪಿಜಿಡಿಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬ ಹುದು.
ವಯೋಮಿತಿ:
ಹುದ್ದೆಗಳಿಗನುಸಾರ 27 ರಿಂದ ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಡಿ (ಸಾಮಾನ್ಯ / ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಬ್ಯಾಂಕ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ, ಮ್ಯಾನೇಜರ್ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/-ರೂ ಮತ್ತು ಅಡ್ವೈಸರ್ ಫಾರ್ ಫ್ರಾಡ್ ಮ್ಯಾನೇಜ್ಮೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್ https://sbi.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 12,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











