ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 8,904 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಮೇ 3,2019 ರೊಳಗೆ ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಹುದ್ದೆಗಳಿಗೆ ಸೇರಲು ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಕ್ಲರ್ಕ್ |
| Organisation | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
| Educational Qualification | ಪದವಿ /ಸಮನಾದ ವಿದ್ಯಾರ್ಹತೆ |
| Job Location | ಭಾರತದೆಲ್ಲೆಡೆ |
| Salary Scale | 13,075/-ರಿಂದ 31,450/-ರೂ |
| Application Start Date | April 12, 2019 |
| Application End Date | May 3, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪದವಿಗೆ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಏಪ್ರಿಲ್ 1,2019 ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 13,075/-ರಿಂದ 31,450/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 125/-ರೂ ಮತ್ತು ಸಾಮಾನ್ಯ / ಓಬಿಸಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ: ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ https://www.sbi.co.in/ ಗೆ ಹೋಗಿ ಅರ್ಜಿಯನ್ನು ಮೇ 3,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನುಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











