ಎಸ್‌ಬಿಐ ನಲ್ಲಿ 8000 ಹುದ್ದೆಗಳಿವೆ…ತಿಂಗಳಿಗೆ 30 ಸಾವಿರಕ್ಕೂ ಅಧಿಕ ವೇತನ ಪಡೆಯುವ ಅವಕಾಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 8000 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಎಸ್‌ಬಿಐ ನಲ್ಲಿ ಬಂಪರ್ ಉದ್ಯೋಗಾವಕಾಶ...8000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 26,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:

ಶೈಕ್ಷಣಿಕ ವಿದ್ಯಾರ್ಹತೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ವಯೋಮಿತಿ:

ವಯೋಮಿತಿ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಜನವರಿ 20,2020ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. 

ವೇತನದ ವಿವರ ಮತ್ತು ಆಯ್ಕೆ ಪ್ರಕ್ರಿಯೆ:

ವೇತನದ ವಿವರ ಮತ್ತು ಆಯ್ಕೆ ಪ್ರಕ್ರಿಯೆ:

ಎಸ್‌ಬಿಐ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,765/- ರಿಂದ 31,450/-ರೂ ವೇತನವನ್ನು ನೀಡಲಾಗುವುದು. ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು 

ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 26,2020ರೊಳಗೆ
ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2020 notification has been released on official website for the recruitment of 8000 junior associate posts. Interested candidates can apply through online before 26th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+