
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 8500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 10,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
ಶೈಕ್ಷಣಿಕ ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಡಿಸೆಂಬರ್ 31,2020ರ ಅನ್ವಯ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅಕ್ಟೋಬರ್ 31,2020ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, 2ಎ, 2ಬಿ, 3ಎ ಮತ್ತು 3ಬಿ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲ ವರ್ಷ ತಿಂಗಳಿಗೆ 15,000/- ರೂ, ಎರಡನೇ ವರ್ಷ ತಿಂಗಳಿಗೆ 16,500/-ರೂ ಮತ್ತು ಮೂರನೇ ವರ್ಷ 19,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಪ್ರಾದೇಶಿಕ ಭಾಷೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡತಕ್ಕದ್ದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್ https://sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ನವೆಂಬರ್ 20,2020
ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಡಿಸೆಂಬರ್ 10,2020
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಡಿಸೆಂಬರ್ 10,2020
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











