SBI Recruitment 2021: 5237 ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 5237 ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಎಸ್‌ಬಿಐ ನಲ್ಲಿ 5237 ಹುದ್ದೆಗಳಿಗೆ ಮೇ.20ರೊಳಗೆ ಅರ್ಜಿ ಹಾಕಿ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಒಂದು ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಮೇ 20,2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:

ಶೈಕ್ಷಣಿಕ ವಿದ್ಯಾರ್ಹತೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆಗಸ್ಟ್ 16,2021ರ ಅನುಸಾರ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ವಯೋಮಿತಿ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) 10 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ವೇತನದ ವಿವರ:

ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,900/- ರಿಂದ 47,920/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡತಕ್ಕದ್ದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ ಓಬಿಸಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/web/careers ಗೆ ಭೇಟಿ ನೀಡಿ.

ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2021 notification has been released for 5237 junior associate posts. Application date extended to may 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+