
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತೀಯ ಅಭ್ಯರ್ಥಿಗಳಿಂದ 452 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಸ್‌ಬಿಐ ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.
ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 11,2021ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ಶೈಕ್ಷಣಿಕ ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಎಂಬಿಎ/ಪಿಜಿಡಿಬಿಎಂ, ಎಂಸಿಎ, ಎಂ.ಸ್ಸಿ, ಪದವಿ, ಬಿ.ಇ/ಬಿ.ಟೆಕ್, ಸ್ನಾತಕೋತ್ತರ ಪದವಿ, ಸಿಎ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅಕ್ಟೋಬರ್ 31,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, 2ಎ, 2ಬಿ, 3ಎ ಮತ್ತು 3ಬಿ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್ https://sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಡಿಸೆಂಬರ್ 22,2020
ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜನವರಿ 11,2021


Click it and Unblock the Notifications











