SBI Recruitment 2021 : 46 ಅಸಿಸ್ಟೆಂಟ್ ಮ್ಯಾನೇಜರ್/ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 2021ನೇ ಸಾಲಿಗೆ 46 ಸಹಾಯಕ ಮ್ಯಾನೇಜರ್/ಎಂಜಿನಿಯರ್ (ಸಿವಿಲ್/ಎಲೆಕ್ಟ್ರಿಕಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ​​ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್‌ಬಿಐ ನಲ್ಲಿ ಉದ್ಯೋಗಾವಕಾಶ: 46 ಹುದ್ದೆಗಳ ನೇಮಕಾತಿ

ಎಸ್‌ಬಿಐ ಭಾರತದಾದ್ಯಂತ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಎಸ್‌ಬಿಐ ನೇಮಕಾತಿಗೆ ಆನ್‌ಲೈನ್ ನೋಂದಣಿ ಮತ್ತು ಅರ್ಜಿ ಪ್ರಕ್ರಿಯೆಯು ಆಗಸ್ಟ್ 13, 2021 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 02, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎಸ್‌ಬಿಐ ನೇಮಕಾತಿ 2021: ಅರ್ಹತೆ ಮತ್ತು ಅನುಭವ:

ಎಸ್‌ಬಿಐ ನೇಮಕಾತಿ 2021: ಅರ್ಹತೆ ಮತ್ತು ಅನುಭವ:

ಎಸ್‌ಬಿಐ 2021ರ ಸಹಾಯಕ ಮ್ಯಾನೇಜರ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಜೊತೆಗೆ ಸ್ನಾತಕೋತ್ತರ ಪದವಿಗೆ 2 ವರ್ಷಗಳ ಅನುಭವ ಮತ್ತು ಪದವಿಗೆ 1 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

SBI ನೇಮಕಾತಿ 2021: ವಯೋಮಿತಿ ಮತ್ತು ಅರ್ಜಿ ಶುಲ್ಕ:

SBI ನೇಮಕಾತಿ 2021: ವಯೋಮಿತಿ ಮತ್ತು ಅರ್ಜಿ ಶುಲ್ಕ:

ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಮತ್ತು ಏಪ್ರಿಲ್ 01, 2021 ರವರೆಗೆ 30 ವರ್ಷಗಳನ್ನು ಮೀರಿರಬಾರದು. ಎಸ್‌ಬಿಐ ಎಸ್‌ಒ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿದಾರರು ಎಸ್‌ಬಿಐ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ 750/-ರೂ (ಜನರಲ್/ಇಡಬ್ಲ್ಯೂಎಸ್/ಒಬಿಸಿ) ಅರ್ಜಿ ಶುಲ್ಕವನ್ನು ಆನ್‌ಲೈನ್ (ನೆಟ್-ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್) ಮೋಡ್ ಮೂಲಕ ಮಾತ್ರ ಪಾವತಿಸಬಹುದು. ಆದಾಗ್ಯೂ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

SBI ನೇಮಕಾತಿ 2021: ಆಯ್ಕೆ ಪ್ರಕ್ರಿಯೆ ಮತ್ತು ವೇತನ ಶ್ರೇಣಿ:

SBI ನೇಮಕಾತಿ 2021: ಆಯ್ಕೆ ಪ್ರಕ್ರಿಯೆ ಮತ್ತು ವೇತನ ಶ್ರೇಣಿ:

ಎಸ್‌ಬಿಐ ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಎಸ್‌ಬಿಐ ನೇಮಕಾತಿ 2021ರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

SBI ನೇಮಕಾತಿ 2021 : ಅರ್ಜಿ ಸಲ್ಲಿಕೆ:

SBI ನೇಮಕಾತಿ 2021 : ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 13,2021 ರಿಂದ ಸೆಪ್ಟೆಂಬರ್ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಎಸ್‌ಬಿಐ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2021 notification has been released for 46 assistant manager/engineer posts. Candidates can apply before September 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+