SBI Recruitment 2021 : 6100 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಬಿಐ ನಲ್ಲಿ 6100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 6100 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅಧಿಸೂಚನೆ ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಜುಲೈ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ನಲ್ಲಿ 6100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ ಏನಿರಬೇಕು ?:

ಎಸ್‌ಬಿಐ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:

ಅಕ್ಟೋಬರ್ 31,2020ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಎಸ್‌ಬಿಐ ನಲ್ಲಿ 6100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಆಯ್ಕೆ ಪ್ರಕ್ರಿಯೆ:

ಎಸ್‌ಬಿಐ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಭಾಷಾ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಎಸ್‌ಬಿಐ ನಲ್ಲಿ 6100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಬಿಐ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜುಲೈ 26,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜುಲೈ 6,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 26,2021

ಅಭ್ಯರ್ಥಿಗಳು ಎಸ್‌ಬಿಐ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2021 notification has been released for 6100 apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+