ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1422 ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಒಂದು ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಅಕ್ಟೋಬರ್ 18,2022 ರಿಂದ ನವೆಂಬರ್ 7,2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
ಎಲ್ಲೆಲ್ಲಿ ಎಷ್ಟು ಹುದ್ದೆಗಳಿವೆ ? :
ರಾಜಸ್ಥಾನ - 201 ಹುದ್ದೆಗಳು
ತೆಲಂಗಾಣ - 176 ಹುದ್ದೆಗಳು
ಒಡಿಶಾ - 175 ಹುದ್ದೆಗಳು
ಮಧ್ಯಪ್ರದೇಶ/ಛತ್ತೀಸ್‌ಗರ್ - 183 ಹುದ್ದೆಗಳು
ವೆಸ್ಟ್ ಬೆಂಗಾಲ/ಸಿಕ್ಕಿಂ/ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು - 175 ಹುದ್ದೆಗಳು
ಮಹಾರಾಷ್ಟ್ರ/ಗೋವಾ - 212 ಹುದ್ದೆಗಳು
ಅಸ್ಸಾಂ/ಅರುಣಾಚಲ ಪ್ರದೇಶ/ಮಣಿಪುರ/ಮೇಘಾಲಯ/ಮಿಜೋರಾಂ/ನಾಗಾಲ್ಯಾಂಡ್/ತ್ರಿಪುರ - 300 ಹುದ್ದೆಗಳು
ಒಟ್ಟು - 1422 ಹುದ್ದೆಗಳು
SBI ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದಲ್ಲದೆ ಅಭ್ಯರ್ಥಿಗಳು ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಬ್ಯಾಂಕಿನಲ್ಲಿ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
SBI ನೇಮಕಾತಿ 2022 ವಯೋಮಿತಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳಿಗೆ ಸೆಪ್ಟೆಂಬರ್ 30,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
SBI ನೇಮಕಾತಿ 2022 ವೇತನದ ವಿವರ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/-ರೂ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.
SBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
SBI ನೇಮಕಾತಿ 2022 ಅರ್ಜಿ ಶುಲ್ಕ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
SBI ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್ https://sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ ಅಕ್ಟೋಬರ್ 18,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











