ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನೇಮಕಾತಿಯ 32 ಸಹಾಯಕ ಮುಖ್ಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 21,2022 ರಿಂದ ಜೂನ್ 12,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

SBI ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನೇಮಕಾತಿಯ ಸಹಾಯಕ ಮುಖ್ಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
SBI ನೇಮಕಾತಿ 2022 ವಯೋಮಿತಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನೇಮಕಾತಿಯ ಸಹಾಯಕ ಮುಖ್ಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 35 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
SBI ನೇಮಕಾತಿ 2022 ವೇತನದ ವಿವರ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನೇಮಕಾತಿಯ ಸಹಾಯಕ ಮುಖ್ಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/- ರಿಂದ 1,00,350/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್ಆರ್ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

SBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನೇಮಕಾತಿಯ ಸಹಾಯಕ ಮುಖ್ಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
SBI ನೇಮಕಾತಿ 2022 ಅರ್ಜಿ ಶುಲ್ಕ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನೇಮಕಾತಿಯ ಸಹಾಯಕ ಮುಖ್ಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
SBI ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನೇಮಕಾತಿಯ ಸಹಾಯಕ ಮುಖ್ಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಎಸ್ಬಿಐ ನ ಅಧಿಕೃತ ವೆಬ್ಸೈಟ್ https://www.sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 21,2022 ರಿಂದ ಜೂನ್ 12,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.