SBI Recruitment 2022 : ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ 5 ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 11 ರಿಂದ ಮಾರ್ಚ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಕೇಳಲಾಗಿರುವ ವಿದ್ಯಾರ್ಹತೆ, ವೇತನ ಮತ್ತು ಆಯ್ಕೆ ಪ್ರಕ್ರಿಯೆ ಇತರೆ ಮಾಹಿತಿಗಳ ಕುರಿತು ತಿಳಿಯಲು ಮುಂದೆ ಓದಿ.

ಎಸ್‌ಬಿಐ ನಲ್ಲಿ ಉದ್ಯೋಗಾವಕಾಶ

SBI ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುವುದು.

SBI ನೇಮಕಾತಿ 2022 ವಯೋಮಿತಿ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SBI ನೇಮಕಾತಿ 2022 ವೇತನ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಸ್‌ಬಿಐ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

SBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

SBI ನೇಮಕಾತಿ 2022 ಅರ್ಜಿ ಶುಲ್ಕ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

SBI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://sbi.co.in/web/careers ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸಲಹೆಗಾರ ಹುದ್ದೆಗೆ ಮಾರ್ಚ್ 25,2022ರೊಳಗೆ ಮತ್ತು ಇತರೆ ಹುದ್ದೆಗಳಿಗೆ ಮಾರ್ಚ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು.

For Quick Alerts
ALLOW NOTIFICATIONS  
For Daily Alerts

English summary
SBI recruitment 2022 notification has been released for 5 specialist cadre officer posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X