SBI Recruitment 2022 : 5000ಕ್ಕೂ ಅಧಿಕ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Kavya L

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 2022ನೇ ಸಾಲಿಗೆ 5000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ​​ಅರ್ಜಿಗಳನ್ನು ಆಹ್ವಾನಿಸಿದೆ.

ಎಸ್‌ಬಿಐ 5000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಈ ಹುದ್ದೆಗಳಿಗೆ ಆನ್‌ಲೈನ್ ನೋಂದಣಿ ಮತ್ತು ಅರ್ಜಿ ಪ್ರಕ್ರಿಯೆಯು ಸೆಪ್ಟೆಂಬರ್ 7,2022 ರಿಂದ ಪ್ರಾರಂಭಾಗಿ ಸೆಪ್ಟೆಂಬರ್ 27,2022 ರಂದು ಕೊನೆಗೊಳ್ಳುತ್ತದೆ.

ಎಸ್‌ಬಿಐ ಎಸ್‌ಒ ನೇಮಕಾತಿ 2022 ವಿದ್ಯಾರ್ಹತೆ:

ಎಸ್‌ಬಿಐ ಎಸ್‌ಒ ನೇಮಕಾತಿ 2022 ವಿದ್ಯಾರ್ಹತೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಎಸ್‌ಬಿಐ ಎಸ್‌ಒ ನೇಮಕಾತಿ 2022 ವಯೋಮಿತಿ

ಎಸ್‌ಬಿಐ ಎಸ್‌ಒ ನೇಮಕಾತಿ 2022 ವಯೋಮಿತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆಗಸ್ಟ್ ೧,೨೦೨೨ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) 10 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಎಸ್‌ಬಿಐ ಎಸ್‌ಒ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:
 

ಎಸ್‌ಬಿಐ ಎಸ್‌ಒ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡತಕ್ಕದ್ದು.

ಎಸ್‌ಬಿಐ ಎಸ್‌ಒ ನೇಮಕಾತಿ 2022 ವೇತನನದ ವಿವರ

ಎಸ್‌ಬಿಐ ಎಸ್‌ಒ ನೇಮಕಾತಿ 2022 ವೇತನನದ ವಿವರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,900/- ರಿಂದ 47,920/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

ಎಸ್‌ಬಿಐ ಎಸ್‌ಒ ನೇಮಕಾತಿ 2022 ಅರ್ಜಿ ಶುಲ್ಕ

ಎಸ್‌ಬಿಐ ಎಸ್‌ಒ ನೇಮಕಾತಿ 2022 ಅರ್ಜಿ ಶುಲ್ಕ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ ಓಬಿಸಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಎಸ್‌ಬಿಐ ಎಸ್‌ಒ ನೇಮಕಾತಿ 2022 ಅರ್ಜಿ ಸಲ್ಲಿಕೆ

ಎಸ್‌ಬಿಐ ಎಸ್‌ಒ ನೇಮಕಾತಿ 2022 ಅರ್ಜಿ ಸಲ್ಲಿಕೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2022ರ ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sbi.co.in/web/careers/current-openings ಗೆ ಭೇಟಿ ನೀಡಿ.

ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಸೆಪ್ಟೆಂಬರ್ 7,2022 ಸೆಪ್ಟೆಂಬರ್ 27,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
SBI recruitment 2022 notification has been released for 5000 junior associate posts. Interested candidates can apply before September 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X