SBI SCO Recruitment 2021 : 22 ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಬಿಐ ನಲ್ಲಿ 22 ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 22 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಎಸ್‌ಬಿಐ ನಲ್ಲಿ 22 ಉಪ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ, ಸಂಬಂಧ ವ್ಯವಸ್ಥಾಪಕ ಮತ್ತು ಉತ್ಪನ್ನ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳ ನೋಂದಣಿ ಮತ್ತು ಅರ್ಜಿ ಪ್ರಕ್ರಿಯೆ ಆಗಸ್ಟ್ 13, 2021 ರಿಂದ ಆರಂಭಗೊಂಡಿದ್ದು ಸೆಪ್ಟೆಂಬರ್ 02,2021ರಂದು ಕೊನೆಗೊಳ್ಳಲಿದೆ.

ಎಸ್‌ಬಿಐ ಎಸ್‌ಸಿಒ ನೇಮಕಾತಿ 2021 ಹುದ್ದೆಗಳ ವಿವರ:

ಎಸ್‌ಬಿಐ ಎಸ್‌ಸಿಒ ನೇಮಕಾತಿ 2021 ಹುದ್ದೆಗಳ ವಿವರ:

ಉಪ ವ್ಯವಸ್ಥಾಪಕ (Agri Spl) - 10 ಹುದ್ದೆಗಳು

ಸಹಾಯಕ ವ್ಯವಸ್ಥಾಪಕ (ಮಾರ್ಕೆಟಿಂಗ್ ಮತ್ತು ಸಂವಹನ) - 04 ಹುದ್ದೆಗಳು

ಸಂಬಂಧ ವ್ಯವಸ್ಥಾಪಕ (OMP) - 06 ಹುದ್ದೆಗಳು

ಉತ್ಪನ್ನ ನಿರ್ವಾಹಕ (OMP) - 02 ಹುದ್ದೆಗಳು

ಒಟ್ಟು - 22 ಹುದ್ದೆಗಳು

ಎಸ್‌ಬಿಐ ಎಸ್‌ಒ ನೇಮಕಾತಿ 2021 ಅರ್ಹತಾ ಮಾನದಂಡಗಳು :

ಎಸ್‌ಬಿಐ ಎಸ್‌ಒ ನೇಮಕಾತಿ 2021 ಅರ್ಹತಾ ಮಾನದಂಡಗಳು :

ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ನೇಮಕಾತಿ 2021ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಎಂಬಿಎ/ಪಿಜಿಡಿಎಂ ಹೊಂದಿರಬೇಕು; ಎಂಜಿನಿಯರಿಂಗ್ ವಿಭಾಗಗಳಲ್ಲಿ ಬಿ.ಇ/ಬಿ.ಟೆಕ್ ವಿದ್ಯಾರ್ಹತೆ ಜೊತೆಗೆ MBA/PGDM ಅಥವಾ ಸಂಬಂಧಿತ ವಿಷಯದಲ್ಲಿ ಸಮಾನವಾದ ವಿದ್ಯಾರ್ಹತೆ; ಎಂಬಿಎ (ಮಾರ್ಕೆಟಿಂಗ್)/ಪಿಜಿಡಿಎಂ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಎಸ್‌ಬಿಐ ಎಸ್‌ಸಿಒ ನೇಮಕಾತಿ 2021 ವಯೋಮಿತಿ:

ಎಸ್‌ಬಿಐ ಎಸ್‌ಸಿಒ ನೇಮಕಾತಿ 2021 ವಯೋಮಿತಿ:

ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಯಪಡಿಸಿರುವಂತೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು ಜುಲೈ 1,2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಎಸ್‌ಬಿಐ ಎಸ್‌ಒ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಎಸ್‌ಬಿಐ ಎಸ್‌ಒ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಎಸ್‌ಬಿಐ ಎಸ್‌ಒ ನೇಮಕಾತಿ 2021ರ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಎಸ್‌ಬಿಐ ಎಸ್‌ಒ ನೇಮಕಾತಿ 2021 ವೇತನ :

ಎಸ್‌ಬಿಐ ಎಸ್‌ಒ ನೇಮಕಾತಿ 2021 ವೇತನ :

ಎಸ್‌ಬಿಐ ಎಸ್‌ಸಿಒ ನೇಮಕಾತಿ ಅಧಿಸೂಚನೆ 2021 ರಲ್ಲಿ ನಮೂದಿಸಿರುವಂತೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000 ದಿಂದ 78,230/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಎಸ್‌ಬಿಐ ಎಸ್‌ಸಿಒ ನೇಮಕಾತಿ 2021 ಅರ್ಜಿ ಶುಲ್ಕ:

ಎಸ್‌ಬಿಐ ಎಸ್‌ಸಿಒ ನೇಮಕಾತಿ 2021 ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ 750/-ರೂ ಅನ್ನು (ಜನ್/ಇಡಬ್ಲ್ಯೂಎಸ್/ಒಬಿಸಿ) ಅರ್ಜಿ ಶುಲ್ಕವಾಗಿ ಆನ್‌ಲೈನ್ (ನೆಟ್-ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್) ಮೋಡ್ ಮೂಲಕ ಮಾತ್ರ ಪಾವತಿಸಬೇಕಿರುತ್ತದೆ. ಅಧಿಕೃತ ಎಸ್‌ಬಿಐ ಎಸ್‌ಸಿಒ ಅಧಿಸೂಚನೆ 2021 ರಲ್ಲಿ ಉಲ್ಲೇಖಿಸಿರುವಂತೆ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಎಸ್‌ಬಿಐ ಎಸ್‌ಒ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಎಸ್‌ಬಿಐ ಎಸ್‌ಒ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sbi.co.in/web/careers ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI SCO recruitment 2021 notification has been released for 22 manager posts. Interested candidates can apply before September 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+