SCI Recruitment 2022 : 46 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ 46 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 16,2022 ರಿಂದ ಆಗಸ್ಟ್ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

SCI ನೇಮಕಾತಿ 2022 ವಿದ್ಯಾರ್ಹತೆ :

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಎಂಬಿಎ/ಸ್ನಾತಕೋತ್ತರ ಪದವಿ, ಸಿಎ, ಕಾನೂನು ಪದವಿ, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ, ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

SCI ನೇಮಕಾತಿ 2022 ವಯೋಮಿತಿ :

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇ 1,2022ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SCI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

SCI ನೇಮಕಾತಿ 2022 ವೇತನ :

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

SCI ನೇಮಕಾತಿ 2022 ಅರ್ಜಿ ಶುಲ್ಕ :

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

SCI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.shipindia.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು
ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 16 ರಿಂದ ಆಗಸ್ಟ್ 16,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
SCI recruitment 2022 notification has been released for 46 assistant manager posts. Interested candidates can apply before August 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X