
ಶ್ರೀ ದೇವರಾಜ್ ಅರಸ್ ಉನ್ನತ ಶಿಕ್ಷಣ ಮತ್ತು ಸಂಧಶೋಧನಾ ಅಕಾಡೆಮಿ, ಕೋಲಾರದಲ್ಲಿ 38 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 20ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ ಮತ್ತು ವಯೋಮಿತಿ:
ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ವಿವಿಧ ಬೋಧಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,54,844/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://sduu.ac.in/home ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಜೂನ್ 20,2021ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Office of the human resources management,
SDUAHER,
Tamaka, Kolar-563103.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











