
ಶ್ರೀ ದೇವರಾಜ್ ಅರಸ್ ಉನ್ನತ ಶಿಕ್ಷಣ ಮತ್ತು ಸಂಧಶೋಧನಾ ಅಕಾಡೆಮಿ, ಕೋಲಾರದಲ್ಲಿ 35 ಸ್ಟಾಫ್ ನರ್ಸ್ ಮತ್ತು 6 ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಎಂ.ಎಸ್ಸಿ/ಪಿಬಿ.ಎಸ್ಸಿ/ಬಿ.ಎಸ್ಸಿ/ಜಿಎನ್‌ಎಂ, ಬಿ.ಎಎಸ್ಸಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://sduu.ac.in/home ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಜೂನ್ 15,2021ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Office of the human resources management,
SDUAHER,
Tamaka, Kolar-563103.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











