SEBI Grade A Recruitment 2022 : 120 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ 120 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹುದು.

ಸೆಬಿಯಲ್ಲಿ 120 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿಮಾಡುವ ಮೂಲಕ ಜನವರಿ 5,2022 ರಿಂದ ಜನವರಿ 24,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

SEBI ನೇಮಕಾತಿ 2022 ವಿದ್ಯಾರ್ಹತೆ :

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪದವಿ ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.

SEBI ನೇಮಕಾತಿ 2022 ವಯೋಮಿತಿ :

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಡಿಸೆಂಬರ್ 31,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SEBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

SEBI ನೇಮಕಾತಿ 2022 ವೇತನ :

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 28,150/- ರಿಂದ 1,15,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

SEBI ನೇಮಕಾತಿ 2022 ಅರ್ಜಿ ಶುಲ್ಕ :

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

SEBI ನೇಮಕಾತಿ 2022 ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಜನವರಿ 5,2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 24,2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 24,2022
ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ : ಫೆಬ್ರವರಿ 20,2022
ಫೇಸ್ I ಪ್ರವೇಶ ಪತ್ರ ದಿನಾಂಕ : ಫೆಬ್ರವರಿ 2022
ಫೇಸ್ I ಆನ್‌ಲೈನ್ ಪರೀಕ್ಷೆ - ಫೆಬ್ರವರಿ 20,2022
ಫೇಸ್ II ಆನ್‌ಲೈನ್ ಪರೀಕ್ಷೆ - ಮಾರ್ಚ್ 20,2022

SEBI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.sebi.gov.in/index.html ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವುದರೊಂದಿಗೆ ಜನವರಿ 5,2022 ರಿಂದ ಜನವರಿ 24,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Securities and exchange board of india (SEBI) recruitment 2022 notification has been released for 120 assistant manager posts. Interested candidates can apply before January 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+