SECL Recruitment 2021 : 450 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನಲ್ಲಿ 450 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 5,2021ರೊಳಗೆ ಅರ್ಜಿಯನ್ನು ಹಾಕಬಹುದು.

 

ಹುದ್ದೆಗಳ ವಿವರ:

ಹುದ್ದೆಗಳ ವಿವರ:

ಗ್ರಾಜುಯೇಟ್ ಅಪ್ರೆಂಟಿಸ್ - 140 ಹುದ್ದೆಗಳು
ಟೆಕ್ನೀಶಿಯನ್ ಅಪ್ರೆಂಟಿಸ್ - 310 ಹುದ್ದೆಗಳು
ಒಟ್ಟು 450 ಹುದ್ದೆಗಳು

ವಿದ್ಯಾರ್ಹತೆ:

ವಿದ್ಯಾರ್ಹತೆ:

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ವಯೋಮಿತಿ:

ವಯೋಮಿತಿ:

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಕ್ಟೋಬರ್ 5,2021ರ ಅನ್ವಯ ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:
 

ವೇತನ:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8000/- ರಿಂದ 9000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://secl-cil.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 5,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
SECL recruitment 2021 notification has been released for 450 apprentice posts. Interested candidates can apply through online before October 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X