ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ದಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ.
ಒಟ್ಟು ನಾಲ್ಕು ಹುದ್ದೆಗಳು ಖಾಲಿ ಇದ್ದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ವಿಶೇಷ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ)-02 ಹುದ್ದೆ
ವೇತನ ಶ್ರೇಣಿ: ರೂ.28100-50100/-
ವಿದ್ಯಾರ್ಹತೆ: ಬಿ.ವಿ.ಎಸ್ಸಿ ಮತ್ತು ಎ ಹೆಚ್
ವಿಸ್ತರಣಾಧಿಕಾರಿ ದರ್ಜೆ 3-01 ಹುದ್ದೆ
ವೇತನ ಶ್ರೇಣಿ: 17650-32000/-
ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲಿ ಬಿ.ಎ/ಬಿ.ಕಾಂ/ಬಿ.ಎಸ್ಸಿ/ಬಿಬಿಎಂ ಪದವಿ ಹಾಗೂ ಕಂಪ್ಯೂಟರ್ ನಿರ್ವಹಣೆ ಜ್ವಾನ
ಮಾರುಕಟ್ಟೆ ಸಹಾಯಕ ದರ್ಜೆ 2-01 ಹುದ್ದೆ
ವೇತನ ಶ್ರೇಣಿ: 14550-26700/-
ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲಿ ಬಿ.ಕಾಂ/ಬಿ.ಎಸ್ಸಿ/ಬಿಬಿಎಂ ಪದವಿ ಹಾಗೂ ಕಂಪ್ಯೂಟರ್ ನಿರ್ವಹಣೆ ಜ್ವಾನ
ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು
ಪರೀಕ್ಷಾರ್ಥ ಅವಧಿ
ಪರೀಕ್ಷಾರ್ಥ ಅವಧಿ 2 ವರ್ಷ ಇರುತ್ತದೆ. ಅವಶ್ಯವಿದ್ದಲ್ಲಿ ಪರೀಕ್ಷಾರ್ಥ ಅವಧಿಯನ್ನು ವಿಸ್ತರಿಸಲಾಗುವುದು. ಪರೀಕ್ಷಾರ್ಥ ಅವಧಿಯಲ್ಲಿ ಸೇವೆ ತೃಪ್ತಿಕರವಾಗಿದ್ದಲ್ಲಿ ಮಾತ್ರ ಖಾಯಂಗೊಳಿಸಲಾಗುವುದು.
ಅರ್ಜಿ ಶುಲ್ಕ
ರೂ.400/- ಮೊತ್ತದ ಡಿ.ಡಿ ಯನ್ನು ಮ್ಯಾನೇಜಿಂಗ್ ಡೈರೆಕ್ಟರ್ ಶಿಮುಲ್ ಇವರ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸುವುದು
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರಕ್ಕೆ ಸಹಿ ಮಾಡಿ ಲಗತ್ತಿಸಬೇಕು.
- ಜನ್ಮ ದಿನಾಂಕ, ವಿದ್ಯಾರ್ಹತೆ ಅಂಕಪಟ್ಟಿಗಳು, ಮೀಸಲಾತಿ ಪ್ರಮಾಣಪತ್ರ ಹಾಗೂ ಕಂಪ್ಯೂಟರ್ ನಿರ್ವಹಣೆ ಜ್ಞಾನದ ಕುರಿತು ಪ್ರಮಾಣ ಪತ್ರಗಳ ನಕಲುಗಳನ್ನು ಸರ್ಕಾರಿ ಗೆಜೆಟೆಡ್ ಅಧಿಕಾರಿಗಳ ದೃಢೀಕರಣದೊಂದಿಗೆ ಲಗತ್ತಿಸುವುದು.
- ಅಭ್ಯರ್ಥಿಯು ಈಗಾಗಲೇ ಯಾವುದಾದರು ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ ಅಂತಹ ಸಂಸ್ಥೆಯ ಮುಖ್ಯಸ್ಥರ ಮೂಲಕ ಅರ್ಜಿ ಸಲ್ಲಿಸಬೇಕು
- ನಡತೆ ಮತ್ತು ಗುಣದ ಬಗ್ಗೆ ಶಿಕ್ಷಣ ಸಂಸ್ಥೆ ಮುಖ್ಯಸ್ಥರಿಂದ ಹಾಗೂ ಇತರೆ ಇಬ್ಬರು ಗೆಜೆಟೆಡ್ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದು ಲಗತ್ತಿಸಬೇಕು.
ಆಯ್ಕೆ ವಿಧಾನ
ಆಯಾ ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾದಾಯಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರು (ಮೆರಿಟ್) ಆಧಾರದ ಮೇಲೆ ಪರಿಗಣಿಸಲಾಗುದು.
ಅರ್ಜಿ ಸಲ್ಲಿಕೆ
ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಕಛೇರಿಗೆ ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಸಲ್ಲಿಸಬಹುದಾಗಿದೆ.
ಕೊನೆಯ ದಿನಾಂಕ
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 18-07-2017 ಸಂಜೆ 5 ಗಂಟೆ ಒಳಗೆ
ಹೆಚ್ಚಿನ ಮಾಹಿತಿಗಾಗಿ www.shimul.coop ಗಮನಿಸಿ