Ayush Shivamogga Recruitment 2020: ಯೋಗ ತರಬೇತುದಾರರ ನೇಮಕಾತಿಗೆ ನೇರ ಸಂದರ್ಶನ

ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ ಶಿವಮೊಗ್ಗದಲ್ಲಿ 3 ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಗಳಿಗೆ 2 ಹುದ್ದೆಯಂತೆ ಒಟ್ಟು 6 ಯೋಗ ತರಬೇತಿದಾರರ ನೇಮಕಾತಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸಂದರ್ಶನಕ್ಕೆ ಹಾಜರಾಗಬಹುದು.

ಶಿವಮೊಗ್ಗ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಸೆ.29ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು 10+2 ಪಾಸಾಗಿರಬೇಕು ಮತ್ತು ಯೋಗ ತರಬೇತಿದಾರರು ಯೋಗ ಸರ್ಟಿಫಿಕೇಶನ್ ಬೋರ್ಡ್ ನಿಂದ ಯೋಗ ವೆಲ್ ನೆಸ್ ಇನ್‌ಸ್ಟ್ರಕ್ಟರ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು ಅಥವಾ 10+2 ಪಾಸಾಗಿರಬೇಕು ಜೊತೆಗೆ ಹೆಸರಾಂತರ ಸಂಸ್ಥೆಯಿಂದ ಯೋಗ ತರಬೇತಿಯ ಅನುಭವ ಹೊಂದಿರಬೇಕು.

ವಯೋಮಿತಿ:

ಕನಿಷ್ಟ 21 ರಿಂದ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಯೋಗ ತರಬೇತುದಾರ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ (ಗಂಟೆಗೆ 250/-ರೂ ಅಂದರೆ 32 ಗಂಟೆಗೆ / ತಿಂಗಳಿಗೆ ಪಾವತಿಸಲಾಗುವುದು) ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಯೋಗ ತರಬೇತಿದಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆಪ್ಟೆಂಬರ್ 29,2020ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯೊಳಗೆ ಜಿಲ್ಲಾ ಆಯುಷ್ ಕಛೇರಿಯಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಆಧಾರ್ ಕಾರ್ಡ್, ಎಸ್ಎಸ್ಎಲ್ಸಿ, ದ್ವಿತೀಯ ಪಿ.ಯು.ಸಿ ಅಂಕಪಟ್ಟಿ ಯೋಗ ತರಬೇತಿ ಪ್ರಮಾಣ ಪತ್ರಗಳ 1 ಸೆಟ್ ಜೆರಾಕ್ಸ್ ಪ್ರತಿಗಳನ್ನು 2 ಭಾವಚಿತ್ರದೊಂದಿಗೆ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಧ್ಯಾಹ್ನ 2:30 ರಿಂದ 5:30 ಗಂಟೆಯೊಳಗೆ ಸಂದರ್ಶನಕ್ಕೆ ಮೂಲ ದಾಖಲೆಗಳೊಂದಿಗೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಶಿವಮೊಗ್ಗ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಸೆ.29ಕ್ಕೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
Shivamogga ayush department recruitment 2020 for 6 yoga trainers. Interested candidates can attend walk in interview on september 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+